May 15, 2026
Friday, May 15, 2026
spot_img

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಇರುತ್ತಾ? ಇರಲ್ವಾ? ದೆಹಲಿ ಅಂಗಳಕ್ಕೆ ತಲುಪಿದ ‘ಟೂ ವೀಲರ್’ ವಿವಾದ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಸಂಚರಿಸುತ್ತಿರುವ ಬೈಕ್ ಟ್ಯಾಕ್ಸಿಗಳ ವಿಚಾರದಲ್ಲಿ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಪರವಾನಗಿ ನೀಡುವ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ಕಳೆದ ಜನವರಿ 23ರಂದು ಹೈಕೋರ್ಟ್ ದ್ವಿಸದಸ್ಯ ಪೀಠವು, “ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡಲು ಸರ್ಕಾರ ನಿರಾಕರಿಸುವಂತಿಲ್ಲ” ಎಂದು ಆದೇಶಿಸಿತ್ತು. ಕೇಂದ್ರದ ನಿಯಮಾವಳಿ ಅನ್ವಯ ಯೆಲ್ಲೋ ಬೋರ್ಡ್ ಅಳವಡಿಸಿ ಸೇವೆ ನೀಡಲು ಅವಕಾಶ ನೀಡುವಂತೆ ಸೂಚಿಸಿತ್ತು. ಆದರೆ, ಇದು ಸರ್ಕಾರದ ಸಾರಿಗೆ ನೀತಿಗೆ ವಿರುದ್ಧವಾಗಿದೆ ಎಂಬುದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ವಾದ.

ಈಗಾಗಲೇ ಮುಖ್ಯಮಂತ್ರಿಗಳ ಅನುಮತಿ ಪಡೆದಿರುವ ಸಾರಿಗೆ ಇಲಾಖೆ, ಕಾನೂನು ತಜ್ಞರ ಸಲಹೆಯಂತೆ ಏಪ್ರಿಲ್ 23ರ ಒಳಗಾಗಿ ಮೇಲ್ಮನವಿ ಸಲ್ಲಿಸಲಿದೆ. ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಕೂಡ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿದ್ದು, ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಕಾನೂನು ಸ್ಪಷ್ಟತೆ ಸಿಗಲಿ ಎಂದು ಆಶಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !