ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಷಣದ ವೇಳೆ ದರ್ಶನ್ ಅಭಿಮಾನಿಗಳು ‘ಡಿ ಬಾಸ್ ಡಿ ಬಾಸ್’ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ.
ಈ ಕಾರ್ಯಕ್ರಮದಲ್ಲಿ ದರ್ಶನ್ ಬಗ್ಗೆ ಮಾತನಾಡಿದ ಡಿಸಿಎಂ, ನಾಳೆ ಆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ. ದರ್ಶನ್ ಪತ್ನಿ ಅಪಾಯಿಂಟ್ ಮೆಂಟ್ ಕೇಳಿದ್ದಾರೆ. ಬೆಳಿಗ್ಗೆ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದರು.
ಏನಾದರೂ ಅನ್ಯಾಯ ಆಗಿದ್ದರೆ, ನಾವು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತೇವೆ. ಆದರೆ ನಾವು ಕಾನೂನನ್ನು ಗೌರವಿಸಬೇಕು. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡಲು ನಾವೆಲ್ಲರೂ ಒಗ್ಗೂಡಿ ಶ್ರಮಿಸೋಣ. ಸಂಕಷ್ಟದಲ್ಲಿರುವ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಕೃಪೆ ತೋರಲಿ ಎಂದು ಹಾರೈಸಿದರು.