ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ಯಾಪ್ಸುಲ್‌ನ ಯಶಸ್ವಿ ಸ್ಪ್ಲಾಶ್‌ಡೌನ್ ನಂತರ ಒಂಬತ್ತು ತಿಂಗಳ ನಂತರ ಮೊದಲ ಬಾರಿಗೆ ನಾಸಾ ಕ್ರೂ-9 ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್, ನಿಕ್ ಹೇಗ್, ಬುಚ್ ವಿಲ್ಮೋರ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಅವರು ಭೂಮಿ ಮೇಲಿನ ಗಾಳಿಯನ್ನು ಉಸಿರಾಡಿದರು.
ಮಂಗಳವಾರ ರಾತ್ರಿ 8.35ಕ್ಕೆ 400 ಕಿ.ಮೀ ದೂರದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭೂಮಿಯತ್ತ ಪಯಣ ಆರಂಭಿಸಿತ್ತು. 17 ಗಂಟೆಗಳ ಪಯಣದ ಬಳಿಕ ಇಂದು ನಸುಕಿನ 3.27ರ ಸಮಯಕ್ಕೆ ಅಮೆರಿಕದ ಫ್ಲೋರಿಡಾ ಸಾಗರದಲ್ಲಿ ಲ್ಯಾಂಡ್ ಆಗಿದೆ.
ಸುನೀತಾ ವಿಲಿಯಮ್ಸ್ ಸೇರಿ ನಾಲ್ವರು ಗಗನಯಾತ್ರಿಗಳಿದ್ದ ನೌಕೆಯ ಕ್ಯಾಪ್ಸುಲ್ ಸಮುದ್ರದಲ್ಲಿ ಬಿದ್ದು ತೇಲುತ್ತಿದ್ದಂತೆಯೇ ಮೂರು ಬೋಟ್‌ಗಳಲ್ಲಿ ಅಮೆರಿಕ ನೌಕಾಪಡೆ ಸ್ಥಳಕ್ಕೆ ಧಾವಿಸಿತು. ಸ್ಪೇಸ್ ಎಕ್ಸ್ನ ರಿಕವರಿ ಶಿಪ್ ಕೂಡ ಸ್ಥಳಕ್ಕೆ ಧಾವಿಸಿತು.
ನಾಲ್ವರು ಗಗನಯಾತ್ರಿಗಳನ್ನು ಅವರು ಧರಿಸಿದ್ದ ವಿಶೇಷ ಸ್ಪೇಸ್‌ಸೂಟ್‌ನಲ್ಲೇ ಹೆಲಿಕಾಪ್ಟರ್ ಮೂಲಕ ನಾಸಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಷ್ಟು ದಿನ ಬಾಹ್ಯಾಕಾಶದಲ್ಲಿದ್ದ ಕಾರಣ ಇಲ್ಲಿನ ವಾತಾವರಣಕ್ಕೆ ಗಗನಯಾತ್ರಿಗಳು ಹೊಂದಿಕೊಳ್ಳಬೇಕಿದೆ. ಆರೋಗ್ಯ ಸ್ಥಿತಿ ಸ್ಪಂದಿಸಬೇಕಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
Splashdown of Dragon confirmed – welcome back to Earth, Nick, Suni, Butch, and Aleks! pic.twitter.com/M4RZ6UYsQ2
— SpaceX (@SpaceX) March 18, 2025