150 ಸ್ಥಾನವನ್ನು ಪೂರ್ಣ ಬಹುಮತದೊಂದಿಗೆ ಗೆಲ್ಲಿಸಿ ಕೊಡಿ: ಮತದಾರರಲ್ಲಿ ರಾಹುಲ್ ಗಾಂಧಿ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚುನಾವಣೆಯಲ್ಲಿ ಕಾಂಗ್ರೆಸ್ (Congress) ಕನಿಷ್ಠ 150 ಸ್ಥಾನಗಳನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವಂತೆ ಜನರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತದಾರರಲ್ಲಿ ಮನವಿ ಮಾಡಿದ್ದಾರೆ.

ಬೀದರ್ ನಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬೀದರ್ ಜಿಲ್ಲೆ ಬಸವಣ್ಣನವರ (12ನೇ ಶತಮಾನದ ಸಮಾಜ ಸುಧಾರಕ) ‘ಕರ್ಮಭೂಮಿ’. ಯಾರಾದರೂ ಮೊದಲು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿ ಪ್ರಜಾಪ್ರಭುತ್ವದ ಹಾದಿಯನ್ನು ತೋರಿಸಿದ್ದರೆ ಅದು ಬಸವಣ್ಣ ಎಂದಿದ್ದಾರೆ ರಾಹುಲ್.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಪಕ್ಷದ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯು ಅದರ ಚುನಾವಣಾ ಭರವಸೆಗಳನ್ನು ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ (ಗೃಹ ಜ್ಯೋತಿ), ಪ್ರತಿ ಕುಟುಂಬದ ಮಹಿಳೆಗೆ ಮಾಸಿಕ ₹ 2,000 (ಗೃಹ ಲಕ್ಷ್ಮಿ), ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತ (ಅನ್ನ ಭಾಗ್ಯ), ಮತ್ತು ಪದವೀಧರ ಯುವಕರಿಗೆ ಪ್ರತಿ ತಿಂಗಳು ₹ 3,000 ಮತ್ತು ಡಿಪ್ಲೊಮಾ ಹೊಂದಿರುವವರಿಗೆ ₹ 1,500 ( 18-25 ವರ್ಷ ವಯಸ್ಸಿನವರಿಗೆ) ಎರಡು ವರ್ಷಗಳವರೆಗೆ (ಯುವನಿಧಿ) ನೀಡಲಾಗುವುದು ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ (ಕರ್ನಾಟಕ ಉಸ್ತುವಾರಿ), ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಭಾಲ್ಕಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಈಶ್ವರ ಖಂಡ್ರೆ ಸೇರಿದಂತೆ ಹಲವರು ಇಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!