ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶ ಎದುರು ಟೀಂ ಇಂಡಿಯಾ 5 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಭಾರತ ಅಗ್ರಸ್ಥಾನಕ್ಕೇರಿದ್ದು ಸೆಮೀಸ್‌ಗೆ ಮತ್ತಷ್ಟು ಹತ್ತಿರವಾಗಿದೆ.
ಭಾರತ ನೀಡಿದ್ದ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡ 7 ಓವರ್ ಅಂತ್ಯದ ವೇಳೆಗೆ ಬಾಂಗ್ಲಾದೇಶ ತಂಡವು ವಿಕೆಟ್ ನಷ್ಟವಿಲ್ಲದೇ 66 ರನ್ ಗಳಿಸಿದ್ದಾಗ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು.
ಬಳಿಕ 20 ನಿಮಿಷಗಳ ಕಾಲ ಬಳಿಕ ಬಾಂಗ್ಲಾದೇಶ ತಂಡಕ್ಕೆ ಗೆಲ್ಲಲು 16 ಓವರ್‌ಗಳಲ್ಲಿ 151 ರನ್‌ಗಳ ಗುರಿ ನೀಡಲಾಯಿತು. ಪರಿಷ್ಕೃತ ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ ತಂಡ ಒಂದೆಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೆ , ಮತ್ತೊಂದೆಡೆ ಗೆಲುವಿಗೆ ಹತ್ತಿರವಾಗುತ್ತಿದ್ದರು.
ಕೊನೆಯ ಎರಡು ಓವರ್‌ಗಳಲ್ಲಿ ಬಾಂಗ್ಲಾದೇಶ ಗೆಲ್ಲಲು 31 ರನ್‌ಗಳ ಅಗತ್ಯವಿತ್ತು. 15ನೇ ಓವರ್ ಬೌಲಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ 11 ರನ್ ಬಿಟ್ಟುಕೊಟ್ಟರು. ಹೀಗಾಗಿ ಕೊನೆಯ ಓವರ್‌ನಲ್ಲಿ ಬಾಂಗ್ಲಾಗೆ ಗೆಲ್ಲಲು 20 ರನ್‌ಗಳ ಅಗತ್ಯವಿತ್ತು. ಕೊನೆಯ ಓವರ್ ಬೌಲಿಂಗ್ ಮಾಡುವ ಜವಾಬ್ದಾರಿ ಹೊತ್ತುಕೊಂಡ ಆರ್ಶದೀಪ್ ಸಿಂಗ್ ಮೊದಲ ಎಸೆತದಲ್ಲಿ ಒಂದು ರನ್ ನೀಡಿದರು. ಆದರೆ ಎರಡನೇ ಎಸೆತದಲ್ಲಿ ಸಿಕ್ಸರ್ ನೀಡಿದರು. ಇನ್ನು ಮೂರನೇ ಎಸೆತದಲ್ಲಿ ಯಾವುದೇ ರನ್ ನೀಡಲಿಲ್ಲ. ಕೊನೆಯ 3 ಎಸೆತಗಳಲ್ಲಿ 13 ರನ್‌ಗಳ ಅಗತ್ಯವಿತ್ತು. ನಾಲ್ಕನೇ ಎಸೆತದಲ್ಲಿ 2 ರನ್ ಗಳಿಸಿದರು. ಕೊನೆತ ಎರಡು ಎಸೆತದಲ್ಲಿ ಬಾಂಗ್ಲಾಗೆ ಗೆಲ್ಲಲು 11 ರನ್‌ಗಳ ಅಗತ್ಯವಿತ್ತು. ಆದರೆ 5ನೇ ಎಸೆತದಲ್ಲಿ ಹಸನ್ ಬೌಂಡರಿ ಬಾರಿಸಿದರು. ಹೀಗಾಗಿ ಗೆಲ್ಲಲು ಬಾಂಗ್ಲಾಗೆ 7 ರನ್‌ಗಳ ಅಗತ್ಯವಿತ್ತು. ಆದರೆ ಅಂತಿಮ ಬೌಲ್ ನಲ್ಲಿ ಕೇವಲ ೨ ರನ್ ಗಳಿಸುವಲ್ಲಿ ಸಫಲರಾದರು. ಈ ಮೂಲಕ ಟೀಮ್ ಇಂಡಿಯಾ ೫ ರನ್ ಗಳ ಗೆಲುವು ಸಾಧಿಸಿತು.