ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಶಿವಮೊಗ್ಗದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ.
ಈಗಾಗಲೇ ಕಾಂಗ್ರೆಸ್‌ನಿಂದ ಟಿಕೆಟ್ ಸಿಕ್ಕಿದ್ದು, ಗೀತಾ ಪ್ರಚಾರ ಮಾಡಿದ್ದಾರೆ. ನಾನು ಶಿವಮೊಗ್ಗದ ಜನರ ಪರ ನಿಲ್ತೇನೆ, ಮಹಿಳೆಯರ ಪರವಾಗಿ ಕೆಲಸ ಮಾಡುತ್ತೇನೆ. ಚಿತ್ರರಂಗದ ಕೈ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಕೇಸರಿ ಗಾಳಿ ಇದೆ, ಈಗಾಗಲೇ ಬಿ.ವೈ ರಾಘವೇಂದ್ರ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್. ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಈ ಇಬ್ಬರೂ ಶಿವಮೊಗ್ಗದಲ್ಲಿ ವರ್ಷಗಳಿಂದ ನೆಲೆಸಿದ್ದಾರೆ. ಇದೀಗ ಗೀತಾ ಶಿವರಾಜ್‌ಕುಮಾರ್ ಕೂಡ ಅಖಾಡಕ್ಕಿಳಿದಿದ್ದು, ಸ್ಪರ್ಧೆ ಆಸಕ್ತಿದಾಯಕವಾಗಿರಲಿದೆ.