ನ್ಯೂಜಿಲೆಂಡ್ ವಿರುದ್ಧ ಗೆಲುವು: ಟಿ20 ವಿಶ್ವಕಪ್ ಫೈನಲ್‌ಗೆ ಲಗ್ಗೆಯಿಟ್ಟ ಪಾಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನ್ಯೂಜಿಲೆಂಡ್ ವಿರುದ್ದ ಸೆಮಿಫೈನಲ್ ಪಂದ್ಯದಲ್ಲಿ ಪಾಕ್ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದು, ಈ ಮೂಲಕ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೊದಲ ತಂಡವಾಗಿ ಫೈನಲ್‌ಗೆ ಲಗ್ಗೆಯಿಟ್ಟಿದೆ.

ನ್ಯೂಜಿಲೆಂಡ್ ನೀಡಿದ್ದ 153 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡಕ್ಕೆ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಜೊತೆಯಾಟ ಗೆಲುವಿನ ಹಾದಿ ಮಾಡಿಕೊಟ್ಟಿತು.

ನಾಯಕ ಬಾಬರ್ ಅಜಂ ಕೇವಲ 42 ಎಸೆತಗಳಲ್ಲಿ 7 ಬೌಂಡರಿ ಸಹಿತ 53 ರನ್ ಬಾರಿಸಿ ವಿಕೆಟ್ ನೀಡಿದರೆ, ಮೊಹಮ್ಮದ್ ರಿಜ್ವಾನ್ 43 ಎಸೆತಗಳಲ್ಲಿ 5 ಬೌಂಡರಿ ಸಹಿತ 57 ರನ್ ಬಾರಿಸಿ ಔಟಾದರು.

ಬಳಿಕ ಮೊಹಮ್ಮದ್ ಹ್ಯಾರಿಸ್ 30 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯದರು. ಈ ಮೂಲಕ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡ ನಿರಾಸೆ ಅನುಭವಿಸಿದೆ. ಈ ಗೆಲುವಿನೊಂದಿಗೆ ಬಾಬರ್ ಅಜಂ ಪಡೆ ಭರ್ಜರಿಯಾಗಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!