ಹೊಸದಿಗಂತ ನಿಪ್ಪಾಣಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ರಾಜಕೀಯ ಸಂಚಲನ ಉಂಟಾಗಿದೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಮಿತ್ರಾ ಉಗಳೆ ಅವರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರು ಕಾಂಗ್ರೆಸ್ ಹಾಗೂ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಸದಸ್ಯರು, “ಪ್ರಧಾನಿ ನರೇಂದ್ರ ಮೋದಿ ಅವರ ದಕ್ಷ ನಾಯಕತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಶಶಿಕಲಾ ಜೊಲ್ಲೆ ಅವರು ಮಾಡಿರುವ ಜನಪರ ಕಾರ್ಯಗಳನ್ನು ಮೆಚ್ಚಿ ನಾವು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದೇವೆ,” ಎಂದು ಸಂತಸ ವ್ಯಕ್ತಪಡಿಸಿದರು.
ಸುಮಿತ್ರಾ ಉಗಳೆ ಮತ್ತು ಸುದೀಪ ಉಗಳೆ ಅವರ ತಂಡದ ಈ ಸೇರ್ಪಡೆಯು ಕ್ಷೇತ್ರದಲ್ಲಿ ಬಿಜೆಪಿಯ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.
ಕಾರ್ಯಕ್ರಮದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಎಂ.ಪಿ. ಪಾಟೀಲ, ಸಂಚಾಲಕರಾದ ಶರದ ಜಂಗಟೆ, ಶ್ರೀಕಾಂತ ಬನ್ನೇ, ಸಮಿತ ಸಾಸನೆ, ಬಾಳಾಸಾಹೇಬ ಕದಂ, ಪ್ರಕಾಶ ಶಿಂಧೆ, ಯುನೂಸ್ ಮುಲ್ಲಾ, ಸಾಗರ ದೇಸಾಯಿ, ಹಾಗೂ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದು, ನೂತನ ಸದಸ್ಯರನ್ನು ಪಕ್ಷಕ್ಕೆ ಬರಮಾಡಿಕೊಂಡರು.



