WEATHER UPDATE | ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಗಾಳಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಗಾಳಿಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಉತ್ತರ ಒಳನಾಡಿನ ಹಲವು ಕಡೆ ಅಧಿಕ ಮಳೆಯಾಗುವ ಸಂಭವವಿದೆ. ರಾಜಧಾನಿ ಬೆಂಗಳೂರಿನಲ್ಲಿ ಇದೀಗ ಬಿಸಿಲು ಕಾಣಿಸಿದ್ದು, ಮಧ್ಯಾಹ್ನ ನಂತರ ಮೋಡ ಕವಿದ ವಾತಾವರಣ ಸೃಷ್ಟಿಯಾಗಬಹುದು. ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!