Wednesday, August 10, 2022

Latest Posts

ಬೆಂಗಳೂರಿನ ಹಲವೆಡೆ ಗಾಳಿ ಮಳೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನ ಹಲವೆಡೆ ಗಾಳಿಯಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು, ಆರ್‌ಆರ್ ನಗರ, ಬಿಟಿಎಂ ಲೇಔಟ್, ರಾಜಾಜಿನಗರ, ಮಲ್ಲೇಶ್ವರ, ಬಸವನಗುಡಿ, ಯಶವಂತಪುರ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್ ವೃತ್ತ, ಲಾಲ್‌ಬಾಗ್, ಶಾಂತಿನಗರದಲ್ಲಿ ಹೆಚ್ಚು ಮಳೆಯಾಗಿದೆ.
ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಮೇ 16ಕ್ಕೆ ತೌಕ್ಟೆ ಚಂಡಮಾರುತ ಅಪ್ಪಳಿಸಲಿದ್ದು, ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿ ಹಲವೆಡೆ ಮಳೆಯಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss