ದುರ್ಮಾರ್ಗಗಳ ಬಳಸಿ ಚುನಾವಣೆ ಗೆಲ್ಲುವುದು ಕಾಂಗ್ರೆಸ್ಸಿಗೆ ಹೊಸತೇನೂ ಅಲ್ಲ: ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸೋಲಿಗೆ ಎದೆಗುಂದಬೇಡಿ. ದುರ್ಮಾರ್ಗಗಳನ್ನು ಬಳಸಿ ಉಪಚುನಾವಣೆಯನ್ನು ಗೆಲ್ಲುವುದು ಆಡಳಿತ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ಸಿಗೆ ಹೊಸತೇನೂ ಅಲ್ಲ. ಈ ನಿಟ್ಟಿನಲ್ಲಿ ಈ ಚುನಾವಣೆಯ ಅಪಜಯವನ್ನು ನಾವ್ಯಾರೂ ಹಿನ್ನಡೆ ಎಂದು ಪರಿಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಾರ್ಯಕರ್ತರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ.

ಈ ಸಂಬಂಧ ಅವರು ಸಾಮಾಜಿಕ ಜಾಲತಾಣದ ಮೂಲಕ ‘ಸಹೃದಯ ಕಾರ್ಯಕರ್ತ ಬಂಧುಗಳೇ’ ಎಂದು ಸಂಬೋಧಿಸಿ ಸುದೀರ್ಘ ಬಹಿರಂಗ ಪತ್ರ ಬರೆದಿದ್ದಾರೆ.

ಸಹೃದಯ ಕಾರ್ಯಕರ್ತ ಬಂಧುಗಳೇ, ಉಪ ಚುನಾವಣೆ ಫಲಿತಾಂಶಗಳು ಪಕ್ಷ ಸಂಘಟನೆಯ ಸಾಮರ್ಥ್ಯ ಹಾಗೂ ಪ್ರಭಾವವನ್ನು ಬಿಂಬಿಸುವ ಅಳತೆಗೋಲಾಗಿರುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನು ಆಧರಿಸಿ ಈ ಚುನಾವಣಾ ಫಲಿತಾಂಶಗಳು ಹೊರಹೊಮ್ಮುತ್ತವೆ. ಸದ್ಯ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಎರಡು ಕ್ಷೇತ್ರಗಳಲ್ಲಿ, ಮಿತ್ರ ಪಕ್ಷ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಪರಾಜಯಗೊಂಡಿರುವ ಕಾರಣದಿಂದ ನಾವ್ಯಾರೂ ಎದೆಗುಂದಬೇಕಿಲ್ಲ. ನಿರೀಕ್ಷೆಯಂತೆ ಆಡಳಿತ ಪಕ್ಷ ಕಾಂಗ್ರೆಸ್‌ನ ಅಧಿಕಾರ ದುರುಪಯೋಗ ಹಾಗೂ ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಪರಿಣಾಮ ಬೀರಿದೆ ಎಂಬುದು ನಿಸ್ಸಂಶಯ, ಆದರೂ ಉಪಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ, ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮಗೆ ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತವೂ ಆಗಿದೆ ಎಂದು ಭಾವಿಸೋಣ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!