ಡಿ.4ರಿಂದ ಚಳಿಗಾಲದ ಅಧಿವೇಶನ ಆರಂಭ: ಇಂದು ಸರ್ವಪಕ್ಷ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಸೆಂಬರ್ ನಾಲ್ಕರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಕೇಂದ್ರ ಸರ್ಕಾರ ಇಂದು ಸರ್ವಪಕ್ಷ ಸಭೆ ಕರೆದಿದೆ.

ಡಿಸೆಂಬರ್ 4 ರಿಂದ ಆರಂಭವಾಗುವ ಅಧಿವೇಶನ ಡಿ. 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದ್ದು, ಇಂದೇ ಸರ್ವಪಕ್ಷ ಸಭೆ ನಡೆಸಲಾಗುತ್ತಿದೆ.

ಸಚಿವ ಪ್ರಲ್ಹಾದ ಜೋಶಿ ಸರ್ವಪಕ್ಷ ಸಭೆ ಕರೆದಿದ್ದು, ಸಭೆಯಲ್ಲಿ ಕೇಂದ್ರದ ನಾಯಕರು ಭಾಗವಹಿಸುವ ಸಾಧ್ಯತೆ ಇದೆ.

ಒಟ್ಟಾರೆ 37 ಮಸೂದೆಗಳು ಸಂಸತ್‌ನಲ್ಲಿ ಬಾಕಿ ಇವೆ. ಅದರಲ್ಲಿ 12 ಪರಿಗಣನೆ ಹಾಗೂ ಅಂಗೀಕಾರಕ್ಕಾಗಿ ಮತ್ತು ಏಳು ಮಸೂದೆಗಳು ಪರಿಚಯ, ಪರಿಗಣನೆ ಹಾಗೂ ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!