ಡಿ.9-20ರವರೆಗೆ ಚಳಿಗಾಲದ ಅಧಿವೇಶನ, ಅಗತ್ಯ ಸಿದ್ಧತೆಗೆ ಸ್ಪೀಕರ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಡಿಸೆಂಬರ್ 9 ರಂದು ಅಧಿವೇಶನ ಪ್ರಾರಂಭವಾಗುವ ಸಾಧ್ಯತೆಗಳಿವೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯಲಿದ್ದು, ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ದಿನಾಂಕಗಳನ್ನು ಪ್ರಕಟಿಸುತ್ತಾರೆಂದು ಹೇಳಿದರು.

ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಅಧಿವೇಶನವನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಹಲವು ಸಲಹೆಗಳನ್ನು ನೀಡಲಾಗಿದೆ. ಬೆಳಗಾವಿಯಲ್ಲಿ ಕಳೆದ ವರ್ಷದ ಅಧಿವೇಶನ ಸುಗಮವಾಗಿ ಸಾಗಿದೆ. ಮುಂಬರುವ ಅಧಿವೇಶನವೂ ಇದೇ ಮಾದರಿಯಲ್ಲಿ ನಡೆಯಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!