ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸೆಂಬರ್ 4ರಿಂದ 15ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಚಳಿಗಾಲದ ಅಧಿವೇಶನ ಡಿಸೆಂಬರ್‌ನಲ್ಲಿ ನಡೆಸಲಾಗುತ್ತದೆ, ಇದಕ್ಕಾಗಿ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಡಿಸೆಂಬರ್ 15 ರ ನಂತರ ಶೂನ್ಯ ಮಾಸ, ನವೆಂಬರ್‌ನಲ್ಲಿ ಕನಕ ಜಯಂತಿ, ದೀಪಾವಳಿ ಇರುವ ಕಾರಣ ಅಧಿವೇಶನಕ್ಕೆ 10 ದಿನಗಳು ಸಿಗುವುದಿಲ್ಲ. ಹಾಗಾಗಿ 4-15 ರಂದು ಅಧಿವೇಶನ ನಡೆಸಲಾಗುತ್ತದೆ ಎಂದಿದ್ದಾರೆ.