ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ : ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿನಿಂದ  ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್​ 20ರವರೆಗೆ ನಡೆಯಲಿದೆ. ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ ಸೇರಿದಂತೆ 16 ಮಸೂದೆಗಳನ್ನು ಪರಿಗಣನೆಗೆ ಪಟ್ಟಿ ಮಾಡಿದೆ.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ,ಲಂಚದ ಆರೋಪದಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಯುಎಸ್ ನ್ಯಾಯಾಲಯದಿಂದ ದೋಷಾರೋಪಣೆವಿಷಯಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳು ಕೂಡ ಸಿದ್ಧತೆ ಶುರು ಮಾಡಿವೆ.

ಲೋಕಸಭೆಯಲ್ಲಿ ಬಾಕಿ ಉಳಿದಿರುವ ಮಸೂದೆಗಳು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಒಳಗೊಂಡಿದ್ದು, ಉಭಯ ಸದನಗಳ ಜಂಟಿ ಸಮಿತಿಯು ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದ ನಂತರ ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

ಬ್ಯಾಂಕಿಂಗ್ ನಿಯಮಗಳನ್ನು ಸುಧಾರಿಸಲು ಸರ್ಕಾರವು ಮತ್ತೊಂದು ದೊಡ್ಡ ಹೆಜ್ಜೆಯನ್ನು ಇಡಲಿದೆ. ವಕ್ಫ್ (ತಿದ್ದುಪಡಿ) ಮಸೂದೆ ಮತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ ಸೇರಿದಂತೆ ಎಂಟು ಮಸೂದೆಗಳು ಲೋಕಸಭೆಯಲ್ಲಿ ಬಾಕಿ ಉಳಿದಿವೆ. ಲೋಕಸಭೆಯ ಬುಲೆಟಿನ್ ಪ್ರಕಾರ, ರಾಜ್ಯಸಭೆಯಲ್ಲಿ ಎರಡು ಮಸೂದೆಗಳು ಬಾಕಿ ಉಳಿದಿವೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!