February 6, 2026
Friday, February 6, 2026
spot_img

ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗೋದು ಬೇಡ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿನಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿ.19ರಂದು ಕೊನೆಗೊಳ್ಳಲಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಬಿಹಾರ ಚುನಾವಣೆಯಲ್ಲಿನ ಸೋಲನ್ನು ಕೆಲವು ಪಕ್ಷಗಳಿಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ, ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗಿ ಬದಲಾಗಬಾರದು ಎಂದರು. ಗೆಲುವಿನ ಮೇಲಿನ ದುರಹಂಕಾರದ ಅಭಿವ್ಯಕ್ತಿಯಾಗಿ ಬದಲಾಗಬಾರದು.ನಾವು ಸಮತೋಲನವನ್ನು ಕಾಯ್ದುಕೊಳ್ಳಬೇಕು ಎಂದರು. ವಿರೋಧ ಪಕ್ಷಗಳಿಗೆ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಲು ಸಿದ್ಧನಿದ್ದೇನೆ, ಆದರೆ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಬಾರದು ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !