ಭಾರತದ ಜೊತೆ 1 ಬಿಲಿಯನ್ ಹೂಡಿಕೆ ಒಪ್ಪಂದ ಘೋಷಿಸಿದ ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್​ !

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಪ್ರವಾಸದಲ್ಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್​ ಭಾರತದಲ್ಲಿ 1 ಬಿಲಿಯನ್ ಪೌಂಡ್‌ ಹೂಡಿಕೆಯ ಒಪ್ಪಂದ ಘೋಷಣೆ ಮಾಡಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನದಲ್ಲಿ ಇಷ್ಟೊಂದು ಮೊತ್ತ ಹೂಡಿಕೆ ಮಾಡುವ ಒಪ್ಪಂದವನ್ನು ಅವರು ಪ್ರಕಟಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿ ಬ್ರಿಟಿಷ್ ಹೈಕಮಿಷನ್​ ಪ್ರಕಟಣೆ ಹೊರಡಿಸಿದ್ದು, ಭಾರತದೊಂದಿಗೆ ಬಾಂಧವ್ಯ ವೃದ್ಧಿಸಲು ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ ನೀಡಿದ್ದು, ಉಭಯ ದೇಶಗಳು ಅನೇಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳಲಿವೆ ಎಂದಿದೆ.
ಸಾಫ್ಟ್‌ವೇರ್ ಇಂಜಿನಿಯರಿಂಗ್​​ನಿಂದ ಹಿಡಿದು ಆರೋಗ್ಯ ಕ್ಷೇತ್ರದವರೆಗೆ ಇದೀಗ ಬ್ರಿಟನ್ ಹೂಡಿಕೆ ಮಾಡಲು ನಿರ್ಧರಿಸಿದ್ದು, ಅದಕ್ಕಾಗಿ £1 ಬಿಲಿಯನ್​ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದಿದ್ದು, ಇದರಿಂದ 11,000 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!