ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಒತ್ತುವರಿ ಮಾಡಿಕೊಂಡಿದ್ದ ಅರಣ್ಯ ಭೂಮಿಯನ್ನು ಗ್ರಾಮಸ್ಥರ ನೆರವಿನೊಂದಿಗೆ ತೆರವು

ಹೊಸ ದಿಗಂತ ವರದಿ, ಶಿವಮೊಗ್ಗ:

ತಾಳಗುಪ್ಪ ಸಮೀಪದ ಹೊಂಕೇರಿಯಲ್ಲಿ ವಿದ್ಯುತ್ ನಿಗಮದ ನೌಕರನೊಬ್ಬ ಒತ್ತುವರಿ ಮಾಡಿಕೊಂಡಿದ್ದ ಅರಣ್ಯ ಭೂಮಿಯನ್ನು ಗ್ರಾಮಸ್ಥರ ನೆರವಿನೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ತೆರವುಗೊಳಿಸಿದರು.
ಸಾರ್ವಜನಿಕ ಉಪಯೋಗದ ಭೂಮಿ ವೈಯುಕ್ತಿಕ ಸೊತ್ತಾಗಬಾರದು, ಮುಂದಿನ ಪೀಳಿಗೆಗೆ ಉಳಿಯಬೇಕೆಂಬ ಇಂಗಿತದ ಹೊಂಕೇರಿ ಗ್ರಾಮ ಸುಧಾರಣಾ ಸುಧಾರಣಾ ಸಮಿತಿಯು ಹಲವು ವರ್ಷಗಳ ಹಿಂದೆಯೇ ಎಲ್ಲರ ಒಪ್ಪಿಗೆಯಿಂದ ನಿರ್ಣಯ ಕೈಗೊಂಡಿತ್ತು. ಆದರೆ ಗ್ರಾಮದ ಕೆಲ ಬಲಾಢ್ಯರು ಸರ್ವೇ ನಂ 410, 427, 507ರಲ್ಲಿರುವ ಅರಣ್ಯ, ಗೋಮಾಳ ಭೂಮಿಯನ್ನು ಅತಿಕ್ರಮಿಸಿದ್ದರು. ಗ್ರಾಮಸ್ಥರು ಸ್ಥಳ ತೆರವಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ಮುಖ್ಯಸ್ಥರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ. ನಂತರ ಗ್ರಾಮಸ್ಥರು ಲೋಕಾಯುಕ್ತರ ಮೊರೆ ಹೋಗಿದ್ದರು. ಲೋಕಾಯುಕ್ತರು ಅರಣ್ಯ ಇಲಾಖೆಯಿಂದ ಸ್ಪಷ್ಟನೆ ಕೋರಿದ್ದರು . ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯಿಂದ ಸರ್ವೇ ನಂಬರ್ 410 ರ ಅಂದಾಜು ಒಂದು ಎಕರೆ
ಸ್ಥಳದ ತೆರವು ಕಾರ್ಯಾಚರಣೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss