ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಸ್ಲಿಮರಿಗೆ ಮೀಸಲಾತಿ ನೀಡಿದ್ದು ಎಚ್.ಡಿ.ದೇವೇಗೌಡರಲ್ಲ, ಜನರನ್ನು ದಾರಿ ತಪ್ಪಿಸುವ ಕೆಲಸ ಬೇಡ ಎಂದು ಸಚಿವ ಜಮೀರ್ ಅಹ್ಮದ್ ಕಟುವಾಗಿ ಮಾತನಾಡಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರ ನಡೆಸಿದ ಜಮೀರ್, ಮೀಸಲಾತಿ ಕೊಟ್ಟಿದ್ದು ದೇವೇಗೌಡರಲ್ಲ. ಅದನ್ನ ವೀರಪ್ಪ ಮೊಯ್ಲಿ ಕೊಟ್ಟಿದ್ದು. 1994 ರಲ್ಲಿ ವೀರಪ್ಪ ಮೊಯ್ಲಿ ಕೊಟ್ಟಿದ್ದು. ವೀರಪ್ಪ ಮೊಯ್ಲಿ 6% ಗೆ ರೆಕ್ಮೆಂಡ್ ಮಾಡಿದ್ದರು. ಆದ್ರೆ ದೇವೇಗೌಡರು ಕೊಟ್ಟಿದ್ದು ಕೇವಲ ೪%. ನಮಗೆ ದೇವೇಗೌಡರು ಮೋಸ ಮಾಡಿದ್ದಾರೆ ಎಂದು ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ.