ಸ್ಪರ್ಧಿಸುವ ನಿರ್ಧಾರ ಹಿಂಪಡೆಯಿರಿ: ದಿಂಗಾಲೇಶ್ವರ ಶ್ರೀಗಳಿಗೆ ಬಿಎಸ್‌ವೈ ಮನವಿ

ದಿಗಂತ ವರದಿ ಹುಬ್ಬಳ್ಳಿ:

ಶಿರಹಟ್ಟಿ ದಿಂಗಾಲೇಶ್ವರ ಸ್ವಾಮೀಜಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮೀಜಿಗೆ ಮತ್ತೊಮ್ಮೆ ವಿನಂತಿ ಮಾಡುತ್ತಿದ್ದು, ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಕ್ಷೇತ್ರದ ಮತದಾರರು ಪ್ರಹ್ಲಾದ ಜೋಶಿ ಅವರ ಪರವಾಗಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಭುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

ಈಗಾಗಲೇ ದಿಂಗಾಲೇಶ್ವರ ಸ್ಚಾಮೀಜಿ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ. ಪ್ರಹ್ಲಾದ್ ಜೋಶಿ ನಾಮಪತ್ರ ಹಿನ್ನೆಲೆಯಲ್ಲಿ ಸಿಟಿರವಿ, ಬೈರತಿ ಬಸವರಾಜ್, ಮಾಜಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!