Wednesday, December 24, 2025

ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ವಾಪಸ್ ಪಡೆಯಿರಿ: ಚೆನ್ನಮ್ಮ ವೃತ್ತದಲ್ಲಿ BJP ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ:

ಅಧಿವೇಶನದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಜಾರಿಗೆ ತಂದಿರುವ ಕಾಂಗ್ರೆಸ್ ಸರಕಾರದ ವಿರುದ್ದ ಹಾಗೂ ಕಾಯ್ದೆ ವಿರೋಧಿಸಿ ಕೂಡಲೇ ವಾಪಸ್ ಪಡೆಯುವಂತೆ ಬಿಜೆಪಿ ಕಾರ್ಯಕರ್ತರು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಬುಧವಾರ ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ರ‍್ಯಾಲಿ ಮೂಲಕ ತೆರಳಿ. ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಸಂವಿಧಾನದ ವಿರುದ್ಧವಾಗಿರೋ ಕಾಯ್ದೆ, ಕಾಂಗ್ರೆಸ್ ಸರಕಾರ ನಾಗರಿಕ ಹಕ್ಕುಗಳನ್ನು ಕಿತ್ತುಕೊಳ್ಳುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಸರಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಳ್ಳುವ ಕೆಲಸವನ್ನು ಮಾಡುತ್ತಿದೆ, ಇದು ಸರಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಕಾಯ್ದೆ ಆಗಿದೆ. ದ್ವೇಷ ಭಾಷಣಕ್ಕೆ ಕಾಂಗ್ರೆಸ್ ಸರಕಾರ ನೀಡಿರುವ ವ್ಯಾಖ್ಯಾನವೂ ಅಸ್ಪಷ್ಟವಾಗಿದೆ ಎಂದು ಬಿಜೆಪಿ ಪ್ರತಿಭಟನೆಯಲ್ಲಿ ಆಕ್ರೋಶ್ ವ್ಯಕ್ತಪಡಿಸಿದರು.

ಕಾಂಗ್ರೆಸ್ ನ ಈ ಕಾರ್ಯದಿಂದಾಗಿ ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿಯಾಗಿದೆ. ಜನ ಸಾಮಾನ್ಯರನ್ನೂ ಅಪರಾಧಿ ಮಾಡುವ ಕಾಯ್ದೆ ಆಗಿದೆ. ಹಾಗಾಗಿ ದ್ವೇಷ ಭಾಷಣ ಕಾಯ್ದೆ ವಾಪಸ್ ಪಡೆಯಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿಕೊಂಡರು. ‌

ಈ ವೇಳೆ ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ಯುವರಾಜ್ ಜಾದವ, ನ್ಯಾಯವಾದಿ ಎಂ.ಬಿ ಝರಳಿ, ಮಾಜಿ ಶಾಸಕ ಸಂಜಯ್ ಪಾಟೀಲ, ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಇದ್ದರು.

error: Content is protected !!