Saturday, July 2, 2022

Latest Posts

ಅಫಘಾನಿಸ್ತಾನದಿಂದ ಸೇನೆಯನ್ನು ಹಿಂತೆಗೆದುಕೊಂಡಿರುವುದು ಅತ್ಯುತ್ತಮ ನಿರ್ಧಾರ: ಅಮೆರಿಕ ಅಧ್ಯಕ್ಷ ಜೋ ಬಿಡನ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬರೋಬ್ಬರಿ 20 ವರ್ಷಗಳ ಯುದ್ಧವನ್ನು ಕೊನೆಗೊಳಿಸಿ ಅಫಘಾನಿಸ್ತಾನದಿಂದ ಮೊದಲ ಸೈನ್ಯವನ್ನು ಹಿಂತೆಗೆದುಕೊಂಡಿರುವುದು ಅತ್ಯುತ್ತಮ  ನಿರ್ಧಾರ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡನ್ ಹೇಳಿದ್ದಾರೆ.

ಅಮೆರಿಕ ಪ್ರಮುಖ ರಾಷ್ಟ್ರೀಯ ಹಿತಾಸಕ್ತಿಯ ವಿರುದ್ಧವಾದ ಯುದ್ಧದಲ್ಲಿ ಮುಂದುವರೆಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಶ್ವೇತಭವನದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವಾಗ ಬಿಡನ್ ಹೇಳಿದರು.

ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಾಗ ಈ ಯುದ್ಧವನ್ನು ಕೊನೆಗೊಳಿಸುವುದಾಗಿ ಅಮೆರಿಕದ ಜನರಿಗೆ ಭರವಸೆಯನ್ನು ಕೊಟ್ಟಿದ್ದೇನೆ. ನಾನು ಆ ಬದ್ಧತೆಯನ್ನು ಗೌರವಿಸುತ್ತೇನೆ. ಇದು ಅಮೆರಿಕದ ಜನರೊಂದಿಗೆ ಪ್ರಮಾಣಿಕವಾಗಿರುವ ಸಮಯ. ಇನ್ನು ಮುಂದೆ ಅಫಘಾನಿಸ್ತಾನದಲ್ಲಿ ಮುಕ್ತ ಕಾರ್ಯಾಚರಣೆಯಲ್ಲಿ ನಾವು ಯಾವುದೇ ಸ್ಪಷ್ಟವಾದ ಉದ್ದೇಶವನ್ನು ಹೊಂದಿಲ್ಲ’ ಎಂದು ಹೇಳಿದ್ದಾರೆ.

ಅಮೆರಿಕ ಹೊಸ ಸವಾಲುಗಳನ್ನು ಎದುರಿಸುತ್ತಿದೆ. ಚೀನಾ ಮತ್ತು ರಷ್ಯಾದಿಂದಲೂ ಹಲವು ಕ್ಷೇತ್ರಗಳಲ್ಲಿ ಸ್ಥರ್ಧೆ ಎದುರಾಗಿದೆ. ಸೈಬರ್ ದಾಳಿ, ಪರಮಾಣು ಪ್ರಸರಣದ ಸವಾಲುಗಳು ನಮ್ಮ ಮುಂದಿದೆ ಎಂದು ಹೇಳಿದ್ದಾರೆ.

ಮೊದಲೇ ತಾಲಿಬಾನ್ ಉಗ್ರರಿಗೆ ಮಾತುಕೊಟ್ಟಂತೆ ಆ.31ರಂದು ಅಫಘಾನಿಸ್ತಾನ ಬಿಟ್ಟು ಅಮೆರಿಕ  ಸೇನಾಪಡೆ ವಾಪಸ್ ತವರಿಗೆ ತೆರಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss