Wednesday, July 6, 2022

Latest Posts

ತಿಂಗಳೊಳಗೆ ಮಂಡ್ಯ ಜಿಲ್ಲೆಯ ಮೂರು ತಾಲೂಕುಗಳ ಕುಡಿಯುವ ನೀರಿನ ಯೋಜನೆ ಆರಂಭ: ನಾರಾಯಣ ಗೌಡ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಮಂಡ್ಯ:

ಕಳೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆದಿದ್ದ, ಜಲ್ ಜೀವನ್ ಮಿಶನ್ ಯೋಜನೆಯಡಿ ಮಂಡ್ಯ ಜಿಲ್ಲೆಯ ಮೂರು ತಾಲ್ಲೂಕಿನ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ರೂ. 690 ಕೋಟಿ ಮೊತ್ತದ ಯೋಜನೆ ಇದಾಗಿದ್ದು, ಮೂರು ತಿಂಗಳೊಳಗಾಗಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ತಿಳಿಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜಲ ಜೀವನ್ ಮೀಷನ್ ಯೋಜನೆಯಡಿ ಹಾಗೂ ನಬಾರ್ಡ್ ನೆರವಿನಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಲಿದೆ. ಕೆ.ಆರ್. ಪೇಟೆಯ ಉಪ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆಆರ್‌ಎಸ್ ಜಲಾಶಯದಿಂದ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಭರವಸೆ ನೀಡಿದ್ದರು. ಅಂದರಂತೆ ಈಗ ಯೋಜನೆಗೆ ಆದೇಶ ಹೊರಡಿಸಲಾಗಿದ್ದು, 2023 ರ ರೊಳಗೆ ಪ್ರತಿ ಮನೆಗೆ ನಲ್ಲಿ ಮೂಲಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಯೋಜನೆ ಸಾಕಾರಗೊಳ್ಳಲಿದೆ ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯತಿ, ನಾಗಮಂಗಲ ಪಟ್ಟಣ, ಬಿ.ಜಿ. ನಗರ ಮತ್ತು ಕೆ.ಆರ್. ಪೇಟೆ ತಾಲ್ಲೂಕಿನ 5 ವಸತಿ ಶಾಲೆಗಳಿಗೆ ಕುಡಿಯುವ ನೀರನ್ನು ಪೂರೈಸಲು ರೂ. 690.36 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿತ್ತು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss