ಸೂಕ್ತ ಬಸ್ ನಿಲ್ದಾಣವಿಲ್ಲದೆ ಚಾಲಕರ ಪರದಾಟ: ಸಾರಿಗೆ ಸಚಿವರ ತವರೂರಲ್ಲೇ ಇದೆಂಥ ದುಸ್ಥಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತಿ ದಿನ ನೂರಾರು ಬಸ್‌ಗಳು ಅತ್ತಿಬೆಲೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಸಂಚರಿಸುತ್ತವೆ. ಆದರೆ ಅತ್ತಿಬೆಲೆಯಲ್ಲಿ ಬಸ್‌ಗಳನ್ನು ನಿಲ್ಲಿಸಲು ಸೂಕ್ತ ಬಸ್ ನಿಲ್ದಾಣವಿಲ್ಲ.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಸ್‌ ನಿಲ್ದಾಣಗಳಿಲ್ಲದ ರಸ್ತೆ ಬದಿಯಲ್ಲಿ ನಿಲ್ಲಿಸಬೇಕು. ಕಿಲೋಮೀಟರ್ ಗಟ್ಟಲೆ ರಸ್ತೆ ಬದಿಯಲ್ಲಿ ಬಸ್ ಗಳು ನಿಲ್ಲಬೇಕಾದ ಪರಿಸ್ಥಿತಿ ಇದ್ದು, ಎಲ್ಲೆಂದರಲ್ಲಿ ಬಸ್ ಗಳು ನಿಲ್ಲುವುದರಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ.

ಅತ್ತಿಬೆಲೆಯಿಂದ ಮೆಜೆಸ್ಟಿಕ್, ಹೊಸಕೋಟೆ, ವರ್ತೂರು ಮುಂತಾದ ವಿವಿಧ ಪ್ರದೇಶಗಳಿಗೆ ನಿತ್ಯ ನೂರಾರು ಬಸ್‌ಗಳು ಸಂಚರಿಸುತ್ತವೆ. ಅದೇ ರೀತಿ ಶಾಲೆ, ಕೆಲಸಕ್ಕೆ ಹೋಗುವವರು ದಿನವೂ ಬಸ್ ಹಿಡಿದು ಬಿಸಿಲು, ಮಳೆ ಎನ್ನದೇ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ.

24 ಗಂಟೆ ಸಾರ್ವಜನಿಕ ಸೇವೆ ಒದಗಿಸುವ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿಯ ಬಸ್ ಚಾಲಕರು ಮತ್ತು ನಿರ್ವಾಹಕರು ಸ್ವಲ್ಪ ಸಮಯದವರೆಗೆ ನಿಲುಗಡೆ ಮಾಡಲು ಮತ್ತು ವಿಶ್ರಾಂತಿ ಪಡೆಯಲು ಸ್ಥಳ ಇಲ್ಲದಂತಾಗಿದೆ. ಅಷ್ಟೇ ಅಲ್ಲದೆ ಕುಡಿಯುವ ನೀರು ಅಥವಾ ಇತರ ನೈರ್ಮಲ್ಯ ಸೌಲಭ್ಯಗಳು ಕೂಡ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!