ಮಹಿಳೆಯ ಅಪಹರಣ ಪ್ರಕರಣ: ಹೆಚ್‌ಡಿ ರೇವಣ್ಣಗೆ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ (Kidnap Case) ಮಾಜಿ ಸಚಿವ ಹೆಚ್‌ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರಿದ್ದ ಪೀಠ 5 ಲಕ್ಷ ಬಾಂಡ್‌, ಇಬ್ಬರು ಶ್ಯೂರಿಟಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.

ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್‌ ಸುಧೀರ್ಘ ವಿಚಾರಣೆ ನಡೆಸಿತು. ವಿಶೇಷ ತನಿಖಾ ತಂಡ (SIT) ಪರ ವಕೀಲರು ರೇವಣ್ಣ ಪ್ರಭಾವಿಯಾಗಿದ್ದು ಸಾಕ್ಷ್ಯ ನಾಶ ಮಾಡುವ ಆತಂಕವಿದೆ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡಬಾರದು ಎಂದು ವಾದಿಸಿದರು.
ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಇದ್ದರೆ ಜಾಮೀನು ತಿರಸ್ಕರಿಸಬಹುದು. ಆದರೆ ನನ್ನ ಕಕ್ಷಿದಾರ ರೇವಣ್ಣ ಪ್ರಕರಣದಲ್ಲಿ ಇಲ್ಲಿ ಯಾವುದೇ ಸತ್ಯ ಮತ್ತು ಸಂದರ್ಭಿಕ ಸಾಕ್ಷಿಗಳಿಲ್ಲ. ರೇವಣ್ಣ ಮನೆಯಲ್ಲಿ ಮಹಿಳೆ 10 ವರ್ಷ ಕೆಲಸ ಮಾಡಿದ್ದಾರೆ. ಹೀಗಾಗಿ ಯಾವುದೇ ಅಪಹರಣ ಮಾಡಿಲ್ಲ. ಜಾಮೀನು ನೀಡಬಹುದು ಎಂದು ವಕೀಲ ನಾಗೇಶ್‌ ವಾದಿಸಿದರು.

ಎರಡು ಕಡೆಯ ವಾದ ಆಲಿಸಿದ ನ್ಯಾಯಾಧೀಶರು ಸಂಜೆ 4 ಗಂಟೆಗೆ ವಿಚಾರಣೆ ಪೂರ್ಣಗೊಳಿಸಿ ಸಂಜೆ 6:30ಕ್ಕೆ ಆದೇಶ ಪ್ರಕಟಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!