ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಸ್ಸಾಂ ಮುಖ್ಯಮಂತ್ರಿಗಳಿಗೆ ಗೋ ಮಾಂಸ ಗಿಫ್ಟ್ ಕೊಡುತ್ತೇನೆಂದು ವಾಟ್ಸ್​ಆಯಪ್ ಸ್ಟೇಟಸ್ ಹಾಕಿದ್ದ ಮಹಿಳೆ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗೆ ಗೋ ಮಾಂಸ ಗಿಫ್ಟ್ ಕೊಡುತ್ತೇನೆಂದು ವಾಟ್ಸ್​ಆಯಪ್ ಸ್ಟೇಟಸ್ ಹಾಕಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂನ ನಲ್ಬಾರಿ ಜಿಲ್ಲೆಯ ಹಳ್ಳಿಯೊಂದರ ಮಹಿಳೆ ಈ ರೀತಿ ಸ್ಟೇಟಸ್ ಹಾಕಿದ್ದಳು.
ಮೊದಲಿಗೆ ಸತ್ತು ಮಲಗಿದ್ದ ಗೋವಿನ ಫೋಟೋವನ್ನು ಹಾಕಿದ್ದ ಆಕೆ ನಂತರ ಮಾಂಸದ ಫೋಟೋ ಹಾಕಿ ಅದನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗಿಫ್ಟ್ ಮಾಡುವುದಾಗಿ ಬರೆದುಕೊಂಡಿದ್ದಳು.
ಅಸ್ಸಾಂನಲ್ಲಿ ಗೋವುಗಳ ಅಕ್ರಮ ಸಾಗಣೆ ಮತ್ತು ಗೋಮಾಂಸ ಮಾರಾಟವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಾಡಿರುವ 2021ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಹಿಂದು, ಜೈನ, ಸಿಖ್ ಮತ್ತು ಇತರ ಸಮುದಾಯಗಳು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿ ಅಥವಾ ಯಾವುದೇ ದೇವಾಲಯದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸಲು ಮಸೂದೆಯು ಪ್ರಸ್ತಾಪಿಸಿದೆ. ಮಹಿಳೆಯನ್ನು ಬಂಧಿಸಿ ಕೆಲ ಹೊತ್ತಿನಲ್ಲಿ ಆಕೆಯನ್ನು ಬೇಲ್ ಮೇಲೆ ಬಿಡುಗಡೆ ಮಾಡಿರುವುದಾಗಿ ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss