ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೀವಕ್ಕೆ ಹಾನಿ ಮಾಡುವುದಾಗಿ ಮುಂಬೈ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಒಡ್ಡಿದ ಆರೋಪದ ಮೇಲೆ 34 ವರ್ಷದ ಮಾನಸಿಕ ಅಸ್ವಸ್ಥೆ ಮಹಿಳೆಯನ್ನು ಬಂಧಿಸಿದ್ದಾರೆ.
ಮುಂಬೈ ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ನಿನ್ನೆ ಬೆದರಿಕೆ ಕರೆ ಬಂದಿತ್ತು. ಪಶ್ಚಿಮ ಉಪನಗರದ ಅಂಬೋಲಿ ಪೊಲೀಸ್ ಠಾಣೆಗೆ ಮಹಿಳೆಯಿಂದ ಬಂದ ಕರೆಯಲಾಗಿತ್ತು.
ಕರೆ ಮಾಡಿದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿ ವಿಚಾರಣೆಗಾಗಿ ಕಸ್ಟಡಿಗೆ ಕರೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ತನಿಖೆಯ ನಂತರ, ಮಹಿಳೆ ಮಾನಸಿಕವಾಗಿ ಅಸ್ವಸ್ಥೆ ಎಂದು ತಿಳಿದುಬಂದಿದೆ. ಮಹಿಳೆ ಕರೆ ಮಾಡಿದ್ದು ಚೇಷ್ಟೆಗೆ ಎಂದು ಹೇಳಲಾಗಿದೆ. ಮಹಿಳೆ ಈ ಹಿಂದೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.