ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ: ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಪರಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಮಹಿಳೆಯ ಭಯಾನಕ ಹತ್ಯೆ ನಡೆದಿದ್ದು, ಮಹಿಳೆಯನ್ನ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್​ ಆಗಿರುವಂತಹ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ. ‘

ನಿನ್ನೆ‌ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿಗಳು, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾರೆ. 30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಶನಿವಾರ ರಾತ್ರಿ ಸ್ಥಳೀಯ ವ್ಯಕ್ತಿಯೊಬ್ಬರು ಕಸ ಹಾಕಲು ಬಂದಿದ್ದರು. ಈ ವೇಳೆ ಯುವತಿಯ ತಲೆ ಕೂದಲು ಕಾಣಿಸಿದೆ. ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಶವದ ವಿಚಾರ ಬೆಳಕಿಗೆ ಬಂದಿದೆ. ಸದ್ಯ ರಸ್ತೆಯ ಇಕ್ಕೆಲಗಳ ಸಿಸಿಟಿವಿ ಪರಿಶೀಲನೆ ಮಾಡಿದ್ದು, ಒಬ್ಬನೇ ದುಷ್ಕರ್ಮಿ ಆಟೋದಲ್ಲಿ ಬಾಡಿ ತಂದು ಬಿಸಾಡಿರುವುದು ತಿಳಿದುಬಂದಿದೆ. ಹಂತಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!