ಅನೈತಿಕ ಸಂಬಂಧದ ಶಂಕೆ: ಹಾಡುಹಗಲೇ ಮಹಿಳೆಯ ಬರ್ಬರ ಕೊಲೆ

ಹೊಸದಿಗಂತ ವರದಿ ಕಲಬುರಗಿ:

ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆ, ಓರ್ವ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳ್ಳಂಬೆಳಿಗ್ಗೆ ನಗರದ ಶಹಬಜಾರ್ ಬಳಿ ನಡೆದಿದೆ.

ರೂಪಾ (೩೨) ಬರ್ಬರವಾಗಿ ಕೊಲೆಯಾದ ಮಹಿಳೆಯಾಗಿದ್ದು, ಮೃತ ಮಹಿಳೆ ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮದ ನಿವಾಸಿಯಾಗಿದ್ದು,ಸಮೋಸಾ ಮಾಡಲು ಹೋಟೆಲ್,ಗೆ ತೆರಳುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಹಿಳೆಯ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಎಸಿಪಿ ಚಂದ್ರಶೇಖರ ಸೇರಿದಂತೆ ಹಿರಿಯ ಪೋಲಿಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಚೌಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!