ಹೊಸದಿಗಂತ ವರದಿ ವಿಜಯಪುರ:
ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯೊಬ್ಬಳನ್ನು ದುಷ್ಕರ್ಮಿಯೊಬ್ಬ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ.
ಮೃತಪಟ್ಟವಳನ್ನು ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದವಳಾಗಿದ್ದು, ಇಂಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸಾಯಬಣ್ಣ ಕನ್ನೊಳ್ಳಿ(30) ಎಂದು ಗುರುತಿಸಲಾಗಿದೆ.
ರೇಣುಕಾ ಕನ್ನೊಳ್ಳಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದು, ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಎಂಬವನು ಮಾರಕಾಸ್ತ್ರದಿಂದ ದಾಳಿ ಮಾಡಿದಕ್ಕೆ ರೇಣುಕಾ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಸಾವಿಗೀಡಾಗಿದ್ದಾಳೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.