ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.
ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಮಾಡಿಸಿರುವ ಬಾಗಿಲ ದ್ವಾರಕ್ಕೆ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಕೆತ್ತಿಸಿದ್ದಾರೆ. ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ ಮೇಲೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ಎಂದು ಬರೆಯಿಸಿದ್ದಾರೆ.
ಗೃಹಲಕ್ಷ್ಮಿ ಹಣ ಕೂಡಿಟ್ಟು ಸಿಎಂ ಭಾವಚಿತ್ರದ ಬಾಗಿಲು ಕೆತ್ತಿಸಿದ ಮಹಿಳೆ
