ರಾಷ್ಟ್ರರಾಜಧಾನಿ ದೆಹಲಿಗೆ ಮಹಿಳಾ ಸಿಎಂ: ಯಾರಿವರು ರೇಖಾ ಗುಪ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಿಜೆಪಿ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕರಾದ ರೇಖಾ ಗುಪ್ತಾ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಘೊಷಿಸಿದೆ. ಇದರೊಂದಿಗೆ ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿಗೆ ಮಹಿಳಾ ಮುಖ್ಯಮಂತ್ರಿ ಸಿಕ್ಕಾಂತಾಗಿದೆ.

ರೇಖಾ ಗುಪ್ತಾ ಯಾರು?
ವಿದ್ಯಾರ್ಥಿ ನಾಯಕಿಯಾಗಿ ಗುರುತಿಸಿಕೊಂಡು ರಾಜಕೀಯ ಜೀವನವನ್ನು ಪ್ರಾರಂಭಿಸಿದ 50 ವರ್ಷ ವಯಸ್ಸಿನ ರೇಖಾ ಗುಪ್ತಾ ಅವರು, ಪ್ರಸ್ತುತ ದೆಹಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನು ಅವರು ಈ ಹಿಂದೆ ಬಿಜೆಪಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅವರು ಶಾಲಿಮಾರ್ ಬಾಗ್ (ವಾಯುವ್ಯ) ಸ್ಥಾನವನ್ನು 68,200 ಮತಗಳಿಂದ ಗೆಲುವು ಸಾಧಿಸಿದ್ದರು.

ಇನ್ನು ವೃತ್ತಿಯಲ್ಲಿ ವಕೀಲರಾಗಿರುವ ಗುಪ್ತಾ ಅವರು, 1996 ರಿಂದ 1997 ರವರೆಗೆ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) ಅಧ್ಯಕ್ಷರಾಗಿ ರಾಜಕೀಯದಲ್ಲಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ನಂತರ ಅವರು 2007 ರಲ್ಲಿ ಉತ್ತರಿ ಪಿತಂಪುರ (ವಾರ್ಡ್ 54) ನಿಂದ ದೆಹಲಿ ಕೌನ್ಸಿಲರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ನಂತರ 2012 ರಲ್ಲಿ ಮರುಚುನಾವಣೆಯನ್ನು ಗೆಲವು ದಾಖಲಿಸಿದ್ದರು.

50 ವರ್ಷದ ಗುಪ್ತಾ ಅವರು ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಮತ್ತು ಅತಿಶಿ ನಂತರ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಎನ್‌ಡಿಎ ನಾಯಕರು ಭಾಗಿ
70 ವಿಧಾನಸಭಾ ಸ್ಥಾನಗಳ ಪೈಕಿ ಬರೋಬ್ಬರಿ 48 ಸ್ಥಾನಗಳಲ್ಲಿ ವಿಜಯ ಸಾಧಿಸಿರುವ ಬಿಜೆಪಿಯ ಮುಖ್ಯಮಂತ್ರಿಯ ಪ್ರಮಾಣವಚನ ಕಾರ್ಯಕ್ರಮವು ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಎನ್‌ಡಿಎ ನಾಯಕರಾದ ಚಂದ್ರ ಬಾಬು ನಾಯ್ಡು, ಏಕನಾಥ್ ಶಿಂಧೆ, ನಿತಿಶ್ ಕುಮಾರ್ ಹಾಗೂ ಇತರೆ ಬಿಜೆಪಿ ಸರ್ಕಾರಗಳ ಮುಖ್ಯಮಂತ್ರಿಗಳು ಭಾಗವಹಿಸುತ್ತಾರೆ. ಏತನ್ಮಧ್ಯೆ ದೆಹಲಿ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಮೋಹನ್ ಸಿಂಗ್ ಬಿಶ್ತ್ ಅವರು ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!