ನಿರಂತರ ಮಳೆಗೆ ಮನೆ ಮೇಲ್ಛಾವಣಿ ಕುಸಿದು ವೃದ್ಧೆ ಸಾವು

ಹೊಸದಿಗಂತ ವರದಿ, ವಿಜಯಪುರ:

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಸಾವಿಗೀಡಾದ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ 4 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಶಿವಮ್ಮ ನೂರುಂದಪ್ಪ ಸಾವಳಗಿ (60) ಮತಪಟ್ಟ ವೃದ್ದೆ.

ರಾತ್ರಿ ಸುರಿದ ಜಿಟಿಜಿಟಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ವೃದ್ದೆ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಇಂದು ಪರಿಹಾರ ಧನ ನೀಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!