ಬಾಯ್​ಫ್ರೆಂಡ್​ ಜತೆಗಿನ ವೀಕೆಂಡ್​ ಮೋಜಿನಲ್ಲಿ ದುರಂತ: ರೈಲು ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಬಿದ್ದು ಯುವತಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇರಳದ ಕೊಯಿಕ್ಕೋಡ್​ನಲ್ಲಿ ರೈಲು ಡಿಕ್ಕಿ ಹೊಡೆದ ಬೆನ್ನಲ್ಲೇ ನದಿಗೆ ಬಿದ್ದು ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ.
ಮೃತ ಯುವತಿಯನ್ನು ನಫಾತ್​ ಫತಾಹ್​ (16) ಎಂದು ಗುರುತಿಸಲಾಗಿದೆ.
ಹಳಿಯ ಮೇಲೆ ನಡೆದು ಹೋಗುವಾಗ ಆಕಸ್ಮಿಕವಾಗಿ ರೈಲು ಡಿಕ್ಕಿ ಹೊಡೆದು, ನಂತರ ನದಿಗೆ ಬಿದ್ದು ಮೃತಪಟ್ಟಿದ್ದಾಳೆಂದು ತಿಳಿದುಬಂದಿದೆ.
ಕೊಯಮತ್ತೂರು-ಮಂಗಳೂರು ಪ್ಯಾಸೆಂಜರ್​ ರೈಲು ಯುವತಿಗೆ ಡಿಕ್ಕಿ ಹೊಡೆದಿದೆ. ನದಿಗೆ ಬಿದ್ದ ಆಕೆ ನದಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಮೃತದೇಹವನ್ನು ಬೇಪೋರ್​ನಲ್ಲಿ ವಶಕ್ಕೆ ಪಡೆಯಲಾಗಿದೆ. ಬಾಯ್​ಫ್ರೆಂಡ್​ ಜತೆ ವೀಕೆಂಡ್​ ಮೋಜಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಯುವತಿಯ ಜೊತೆಯಲ್ಲಿದ್ದ ಬಾಯ್​ಫ್ರೆಂಡ್​​ ಕೂಡ ಘಟನೆಯಲ್ಲಿ ಗಾಯಗೊಂಡಿದ್ದು, ಆತನನ್ನು ಕೊಯಿಕ್ಕೋಡ್​ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!