ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದದಲ್ಲಿ ನಡೆದಿದೆ.
ದೆವ್ವ ಹಿಡಿದಿದೆ ಎಂಬ ಅಂಧವಿಶ್ವಾಸಕ್ಕೆ ಒಳಗಾದ ಗಂಡನ ಮನೆಯವರು, ಬೇವಿನ ಕಟ್ಟಿಗೆಯಿಂದ ಭೀಕರವಾಗಿ ಹಲ್ಲೆ ನಡೆಸಿದ ಪರಿಣಾಮ ಆಳಂದ ಮೂಲದ ಮುಕ್ತಾಬಾಯಿ (26) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಜಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆಳಂದ ಪಟ್ಟಣದ ವೆಂಕಟೇಶ್ವರ ನಗರದ ನಿವಾಸಿಯಾದ ಮುಕ್ತಾಬಾಯಿ ಅವರನ್ನು ಆರು ವರ್ಷಗಳ ಹಿಂದೆ ಮಹಾರಾಷ್ಟ್ರದ ಮುರುಮ್ ಗ್ರಾಮದ ಗಿಡ್ಡೆಪ್ಪ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಐದು ವರ್ಷದ ಮಗನಿದ್ದಾನೆ. ಆದರೆ, ಕಳೆದ ಕೆಲವು ದಿನಗಳಿಂದ ಮುಕ್ತಾಬಾಯಿಗೆ ದೆವ್ವ ಹಿಡಿದಿದೆ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

