ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಳೂರು ನಗರದ ಪೂರ್ವ ಹೈಲ್ಯಾಂಡ್ ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಮಹಿಳೆಯೊಬ್ಬರು ಬಿದ್ದು ಮಹಿಳೆ ಸಾವು ಬಿದ್ದು ಮಹಿಳೆ ಸಾವುಬಿದ್ದು ಸಾವನ್ನಪ್ಪಿದ್ದಾರೆ.
ಇಲ್ಲಿನ ತಲಘಟ್ಟಪುರದಲ್ಲಿ ಚರಿಷ್ಮಾ (40) ಮಹಿಳೆ ಚಿಕಿತ್ಸೆಗೆಂದು ಕೆನಡಾದಿಂದ (Canada) ಕೆಲದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಚರಿಷ್ಮಾ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಬಳಿಕ ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!