ಹೊಸದಿಗಂತ ವರದಿ, ವಿಟ್ಲ:
ಅಡುಗೆ ಕೋಣೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡ ಅವರ ಪತ್ನಿ ಸುಶೀಲ(೭೬) ಮೃತಪಟ್ಟ ಮಹಿಳೆ.
ಕೆಲವು ದಿನಗಳ ಹಿಂದೆ ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.