ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪಾರ್ಟ್ಮೆಂಟ್ ಮೇಲಿಂದ ಹಾರಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಅಮೃತಾ ಶರ್ಮ (27) ಮೃತ ಮಹಿಳೆ. ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಅಮೃತಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದರು. ಇತ್ತೀಚಿಗೆ ತನ್ನ ತಂದೆಯನ್ನು ಕಳೆದುಕೊಂಡು ನೊಂದಿದ್ದರು ಎನ್ನಲಾಗಿದೆ.
ನಿನ್ನೆ ರಾತ್ರಿ ಅಪಾರ್ಟ್ಮೆಂಟ್ನ ಹತ್ತನೇ ಮಹಡಿ ಬಾಲ್ಕನಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಹಿನ್ನೆಲೆ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಯುವತಿ ಮೃತಪಟ್ಟಿದ್ದಾಳೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.