ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮೆಟ್ರೋ ರೈಲಿಗೆ ಮಹಿಳೆಯ ಸೀರೆ ಸಿಲುಕಿ ಮೃತಪಟ್ಟಿದ್ದು, ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಇಂದ್ರಲೋಕ್ ಮೆಟ್ರೋ ನಿಲ್ದಾಣದಲ್ಲಿ 35 ವರ್ಷದ ಮಹಿಳೆಯ ಸೀರೆ ಮೆಟ್ರೋ ಬಾಗಿಲಿಗೆ ಸಿಲುಕಿದೆ. ಮೆಟ್ರೋ ಮುಂದೆ ಹೋಗಿದ್ದು, ಆಕೆ ಮೃತಪಟ್ಟಿದ್ದಾರೆ.
ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಸಲು ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.