ಗೋಡೆ ಕುಸಿದು ಮಹಿಳೆ ಸಾವು ಪ್ರಕರಣ: ಸ್ಥಳಕ್ಕೆ ಮಾಜಿ ಸಚಿವ ರಂಜನ್ ಭೇಟಿ, ಪರಿಶೀಲನೆ

ಹೊಸದಿಗಂತ ಸೋಮವಾರಪೇಟೆ:

ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣಗೊಂಡ ಸ್ಥಳಕ್ಕೆ ಮಾಜಿ ಸಚಿವ ಎಂ.ಪಿ.ಅಪ್ಪಚುರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶನಿವಾರ ಬೆಳಗ್ಗೆ 5.30ಕ್ಕೆ ಹಾನಗಲ್ಲು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಸುಷ್ಮಾ ಎಂಬ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದು,ಮನೆಯೊಳಗಿದ್ದ ಮೂವರು ಮಕ್ಕಳು ಹಾಗೂ ಆಕೆಯ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ರಂಜನ್ ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದರಲ್ಲದೆ, ಕುಟುಂಬ ವರ್ಗಕ್ಕೆ ಸಾಂತ್ವನ ಹೇಳುವುದರೊಂದಿಗೆ, ಧೈರ್ಯ ತುಂಬಿದರು. ಈ ಸಂದರ್ಭ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಕಿಸಿದ ಅವರು ಅಗತ್ಯ ತುರ್ತು ಕ್ರಮಕೈಗೊಳ್ಳುವಂತೆ ತಿಳಿಸಿದರು.

ಘಟನಾ ಸ್ಥಳಕ್ಕೆ ಭೇಟಿ ಸಂದರ್ಭ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಕಾರ್ಯದರ್ಶಿ ಸೋಮೇಶ್ ಮತ್ತಿತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!