ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ನಡುವೆ ರೈಲು ನಿಲ್ದಾಣದಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿರುವ ದುರಂತ ಘಟನೆ ಇಂದು ನಡೆದಿದೆ.
ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ, ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳೊಂದಿಗೆ ಬೆಳಿಗ್ಗೆ 5.30ರ ಸುಮಾರಿಗೆ ರೈಲು ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿ ನಿಂತಿದ್ದ ನೀರಿನಲ್ಲಿ ಮುಂದೆ ಹೋಗಲು ವಿದ್ಯುತ್ ಕಂಬವನ್ನು ಆಧಾರವಾಗಿ ಹಿಡಿದುಕೊಂಡಿದ್ದ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳದಲ್ಲಿದ್ದವರು ಕೂಡಲೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ
ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸದ್ಯ ಈ ಪ್ರಕರಣ ದಾಖಲಾಗಿದೆ.