Monday, December 4, 2023

Latest Posts

ಆನೆ ದಾಳಿಗೆ ಮಹಿಳೆ ಸಾವು: ಜಿಲ್ಲಾಧಿಕಾರಿ ಭೇಟಿ, ಸಾಂತ್ವನ

ಹೊಸ ದಿಗಂತ ವರದಿ, ಮಂಡ್ಯ :

ಜಮೀನಿನ ಬಳಿ ತೆರಳಿದ್ದ ಮಹಿಳೆ ಮೇಲೆ ಆನೆಗಳ ಹಿಂಡು ದಾಳಿ ಮಾಡಿದ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.

ಗ್ರಾಮದ ಸಾಕಮ್ಮ ಬಿನ್ ಲೇ. ಸಿದ್ದಪ್ಪ.(50) ಮೃತ ದುರ್ದೈವಿ ಕಾರ್ಮಿಕ ಮಹಿಳೆಯಾಗಿದ್ದಾರೆ. nಭಾನುವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಸಲಗ ದಾಳಿ ಮಾಡಿದೆ.
ಕೂಲಿ ಕೆಲಸ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದ ಸಾಕಮ್ಮ ಪೀಹಳ್ಳಿ ಗ್ರಾಮದ ಮಾಲೀಕ ರೋಬ್ಬರ ಜಮೀನಿಗೆ ಕೂಲಿ ಕೆಲಸಕ್ಕಾಗಿ ತೆರಳಿದ್ದರು ಇವರ ಜೊತೆ ಎಂಟಕ್ಕೂ ಹೆಚ್ಚು ಮಂದಿ ಕೂಲಿ ಕೆಲಸಕ ಮಾಡುತ್ತಿದ್ದರು.

ಆನೆ ಪ್ರತ್ಯಕ್ಷವಾಗಿರುವ ಬಗ್ಗೆ ಯಾವುದೇ ಸುಳಿವು ಇಲ್ಲದ ಹಿನ್ನೆಲೆಯಲ್ಲಿ ಭಯ ಪ್ರೀತಿ ಇಲ್ಲದೆ ಕೆಲಸ ಮಾಡುತ್ತಿದ್ದರು. ಕಬ್ಬಿನ ಗದ್ದೆಯಲ್ಲಿ ಬಿಡು ಬಿಟ್ಟಿದ್ದ ಆನೆಗಳ ಹಿಂಡಿನಲ್ಲಿದ್ದ ಸಲಗ ಈ ವೇಳೆ ಮಹಿಳೆ ಮೇಲೆ ಏಕಾಏಕಿ ದಾಳಿ ಮಾಡಿದ್ದು, ತಪ್ಪಿಸಿಕೊಳ್ಳಲು ಸಾಕಮ್ಮ ಪ್ರಯತ್ನ ಮಾಡಿದರಾದರೂ ಅಷ್ಟರಲ್ಲಿ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಅದೃಷ್ಟವಶಾತ್ ಪ್ರಾಣಾಪಾಯದಿಂದ ಇತರ ಕಾರ್ಮಿಕರು ಪಾರಾಗಿದ್ದಾರೆ, ದುರಂತ ನಡೆದ ಹಿನ್ನೆಲೆಯಲ್ಲಿ ನೂರಾರು ಜನ ಜಮಾಯಿಸಿ ಕಬ್ಬಿನ ಗದ್ದೆಯಲ್ಲೇ ಬಿಡು ಬಿಟ್ಟಿರುವ ಆನೆಗಳ ಹಿಂಡು ಓಡಿಸಲು ಪ್ರಯತ್ನಿಸಿ ಹಲವರು ಕಲ್ಲು ತೂರಿದರು.

ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಮೇಲೆ ಕಲ್ಲು ತೂರದಂತೆ ಮತ್ತು ಅವುಗಳ ಸಮೀಪ ಹೋಗದಂತೆ ಮನವಿ ಮಾಡಿದ್ದು, ಆದರೆ ರೊಚ್ಚಿಗೆದ್ದ ಜನತೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಅಧಿಕಾರಿಗಳು, ಗ್ರಾಮಾಂತರ ಪೊಲೀಸರು ಸ್ಥಳದಲ್ಲಿದ್ದು, ಮುಂದಿನ ಕ್ರಮ ವಹಿಸಿದ್ದಾರೆ. ಆನೆ ದಾಳಿಯಿಂದ ಮಹಿಳೆ ಸಾವನಪ್ಪಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯ ಬೀತರಾಗಿದ್ದಾರೆ.
ಜಿಲ್ಲಾಧಿಕಾರಿ ಭೇಟಿ :
ಸುದ್ಧಿ ತಿಳಿದ ತಕ್ಷಣ ಜಿಲ್ಲಾಧಿಕಾರಿ ಡಾ. ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಆನೆಗಳ ಹಿಂಡನ್ನು ಕಾಡಿಗಟ್ಟಲು ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಆನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳು ಸಾಂತ್ವನ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!