ನಾಗಭೂಷಣ್ ಕಾರ್ ಅಪಘಾತದಲ್ಲಿ ಮಹಿಳೆ ಸಾವು, ಮದ್ಯಪಾನ ಮಾಡಿದ್ರಾ ನಟ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕೆಯ ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೀಗ ಮೃತ ಪ್ರೇಮಾ ಅವರ ಪತಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಈ ಬೆನ್ನಲ್ಲೇ ನಾಗಭೂಷಣ್ ಮದ್ಯಪಾನ ಮಾಡಿದ್ದರಾ ಇಲ್ಲವಾ ಎಂದು ತಿಳಿಯಲು ರಕ್ತಪರೀಕ್ಷೆ ಮಾಡಿಸಲಾಗಿದೆ.

ರಕ್ತಪರೀಕ್ಷೆಯ ವರದಿ ನೆಗೆಟಿವ್ ಬಂದಿದ್ದು, ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ತಿರುವಿನಲ್ಲಿ ಕಾರನ್ನು ನಿಯಂತ್ರಿಸಲು ಆಗದೇ ಅಪಘಾತ ಆಗಿದೆ ಎಂದು ನಾಗಭೂಷಣ್ ಹೇಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!