ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೌಲಾಲಂಪುರದಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ 37 ವರ್ಷದ ಮಹಿಳೆ ಮಂಗಳವಾರ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸುವ ವೇಳೆ ಶವವಾಗಿ ಪತ್ತೆಯಾಗಿದ್ದು, ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಮಾನವು ಚೆನ್ನೈಗೆ ಆಗಮಿಸಿದ ನಂತರ ಖಾಸಗಿ ವಿಮಾನದ ಸಿಬ್ಬಂದಿಗೆ ಮಹಿಳೆ ಸ್ಪಂದಿಸದಿರುವುದನ್ನು ಕಂಡು, ವೈದ್ಯರ ತಂಡ ಅವರನ್ನು ಪರೀಕ್ಷಿಸಿತು. ನಂತರ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದರು.
ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.