CRIME| ಮನೆಕೆಲಸದಾಕೆ ಮೇಲೆ ಮಹಿಳೆ ಹಲ್ಲೆ: ಲಿಫ್ಟ್‌ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಮನೆ ಯಜಮಾನಿ ಹಲ್ಲೆ ನಡೆಸಿ ಮನಬಂದಂತೆ ವರ್ತಿಸಿದ್ದಾಳೆ. ಈ ಘಟನೆ ಲಿಫ್ಟ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಉತ್ತರ ಪ್ರದೇಶದ ನೋಯ್ಡಾದ ಕ್ಲಿಯೋ ಕೌಂಟಿ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕ್ಲಿಯೋ ಕೌಂಟಿ ಸೊಸೈಟಿಯಲ್ಲಿ ವಾಸಿಸುವ ಶೆಫಾಲಿ ಕೌಲ್ ಎಂಬ ಮಹಿಳೆಯ ಮನೆಯಲ್ಲಿ ಅನಿತಾ ಎಂಬ 20 ವರ್ಷದ ಯುವತಿ ಕೆಲಸ ಮಾಡುತ್ತಿದ್ದಳು. ಶೆಫಾಲಿ ಕಿರುಕುಳ ತಾಳಲಾರದೆ ಕೆಲಸಕ್ಕೆ ಬರಲು ನಿರಾಕರಿಸಿದ್ದಾಳೆ. ಇದೇ ಕಾರಣಕ್ಕೆ ಮಹಿಳೆ ಆಕೆ ಮೇಲೆ ಹಲ್ಲೆ ನಡೆಸಿದ್ದಾಗಿ ತಿಳಿದುಬಂದಿದೆ.

ಪೊಲೀಸರು ಶೆಫಾಲಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಗಳ ಮೇಲೆ ಹಲ್ಲೆ ಮಾಡಿದ ಶೆಫಾಲಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನಿತಾ ತಂದೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!