ಮದ್ಯದ ಮತ್ತಿನಲ್ಲಿ ಸರಣಿ ಅಪಘಾತ: ಎಂಟು ವಾಹನಗಳು ಜಖಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳವಾರ ಮಧ್ಯರಾತ್ರಿ ಪಾನಮತ್ತ ಮಹಿಳೆ ವಾಹನ ಚಲಾಯಿಸಿ ಅವಾಂತರ ಸೃಷ್ಟಿಸಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಅತೀ ವೇಗವಾಗಿ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ 8 ವಾಹನಗಳು ಜಖಂಗೊಂಡಿವೆ. ಅಪಘಾತ ಘಟನೆ ನಡೆದಾಗ ಆಕೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಈ ಕುರಿತು ತ್ರಿ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಶಾಖದ ವಿಐಪಿ ರಸ್ತೆಯಲ್ಲಿರುವ ಸೋಮಾ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಮಹಿಳೆಯೊಬ್ಬರು ಇತರ ಕೆಲವು ಯುವಕರೊಂದಿಗೆ ಮದ್ಯ ಸೇವಿಸಿ, ಅಲ್ಲಿನ ಪಾರ್ಕಿಂಗ್ ಸ್ಥಳದಿಂದ ವಿಐಸಿ ರಸ್ತೆ ಮೂಲಕ ಸಿರಿಪುರಂ ಮಾರ್ಗವಾಗಿ ಕಾರಿನಲ್ಲಿ ವೇಗವಾಗಿ ಸಾಗಿದರು. ಈ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ಫುಟ್ ಪಾತ್ ಮೇಲೆ ಹರಿದಿದೆ. ಇದರಿಂದ ಪಾರ್ಕಿಂಗ್ ಸ್ಥಳದಲ್ಲಿ ನಿಂತಿದ್ದ ಎಂಟು ವಾಹನಗಳಿಗೆ ಕಾರು ಡಿಕ್ಕಿ ಹೊಡೆದು ಆ ವಾಹನಗಳು ಜಖಂಗೊಂಡಿವೆ. ಪಾರ್ಕಿಂಗ್ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

ಕಾರನ್ನು ಓಡಿಸಿದವರು ಯಾರು? ಆ ಸಮಯದಲ್ಲಿ ಕಾರಿನಲ್ಲಿ ಎಷ್ಟು ಮಂದಿ ಇದ್ದರು? ಅವರು ಎಲ್ಲಿಂದ ಬಂದವರು? ಕಾರಿನಲ್ಲಿ ಯಾರಿದ್ದಾರೆ? ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲಿರುವ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳ ಜತೆಗೆ ಬಾರ್ ನ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!