ಹೊಸದಿಗಂತ ಡಿಜಿಟಲ್ ಡೆಸ್ಕ್
ಮಹಿಳೆಯೊಬ್ಬಳ ಮೇಲೆ ನಾಲ್ವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ಕೃತ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿದ್ದ ಆರೋಪಿಗಳು ಆ ವಿಡಿಯೋವನ್ನು ಮಹಿಳೆಯ ಸಂಬಂಧಿಯೊಂದಿಗೆ ಹಂಚಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಕೃತ್ಯ ಎಸಗಿದ್ದ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ಆಕಾಂಕ್ಷಿಯಾಗಿದ್ದ ಮಹಿಳೆ ಹುದ್ದೆಗೆ ಅರ್ಜಿ ತುಂಬಲು ಸಾರ್ವಜನಿಕ ಸೇವಾ ಕೇಂದ್ರಕ್ಕೆ ಹೋಗಿದ್ದಾಗ ಕೇಂದ್ರದ ನಿರ್ವಾಹಕ, ಕಂಪ್ಯೂಟರ್ ಆಪರೇಟರ್, ಅಂಗಡಿ ಮಾಲೀಕರು ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
ಆರೋಪಿಗಳಲ್ಲಿ ಒಬ್ಬಾತ ಮಹಿಳೆಯ ಸಂಬಂಧಿಗೆ ವೀಡಿಯೊ ಕಳುಹಿಸಿದಾಗ ವಿಚಾರ ಬೆಳಕಿಗೆ ಬಂದಿದೆ ಎಂದು ಎಸ್ಪಿ ಶ್ರೀಶ್ ಚಂದ್ರ ಹೇಳಿದ್ದಾರೆ.
ಆರೋಪಿಗಳು ಮಹಿಳೆಯ ಪೋಷಕರು ವಾಸಿಸುತ್ತಿದ್ದ ಅಲಿಗಢ ಜಿಲ್ಲೆಯ ಅದೇ ಗ್ರಾಮಕ್ಕೆ ಸೇರಿದವರು. ಮಹಿಳೆ ಮತ್ತು ಆರೋಪಿಗಳು ಒಟ್ಟಿಗೆ ವಿದ್ಯಾಭ್ಯಾಸ ಮಾಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ