ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ತಡರಾತ್ರಿ ನಡೆದಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ (37) ಕೊಲೆಯಾದವರು.
ತೀರ್ಥಹಳ್ಳಿ ಮೂಲದ ಪ್ರತಿಮಾ ಅವರು ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮನೆಗೆ ನುಗ್ಗಿದ ದುಷ್ಕರ್ಮಿಗಳು ಪ್ರತಿಮಾ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಭಾನುವಾರ ಬೆಳಗ್ಗೆ ಪ್ರತಿಮಾ ಅವರ ಸಹೋದರ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆ ಬಳಿ ತೆರಳಿದಾಗ ಕೊಲೆಯಾದ ವಿಚಾರ ಬೆಳಕಿಗೆ ಬಂದಿದೆ.
ಪರಿಚಿತರಿಂದಲೇ ಕೊಲೆಯಾಗಿರುವ ಅನುಮಾನ ಇರುವ ಹಿನ್ನೆಲೆಯಲ್ಲಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಪುರವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.