ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾವಣೆ: ಚಾಲಕನಿಗೆ ಮಹಿಳೆಯಿಂದ ಚಪ್ಪಲಿ ಸೇವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮದ್ಯಪಾನ ಮಾಡಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿ ಅಪಘಾತ ಮಾಡಿದ ವ್ಯಕ್ತಿಗೆ ಮಹಿಳೆಯೊಬ್ಬಳು ಚಪ್ಪಲಿಯಲ್ಲಿ ಹೊಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ನಗರದ ಸ್ಟೇಷನ್ ರಸ್ತೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿ ಕಾರ್ ಚಾಲನೆ ಮಾಡಿ 2 ಆಟೋ ಮತ್ತು 1 ಬೈಕ್‌ಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಆಟೋ ಪಲ್ಟಿಯಾಗಿದ್ದು, ಆಟೋದಲ್ಲಿದ್ದ ಮಹಿಳೆ ಕಾರ್ ಚಾಲಕನಿಗೆ ಚಪ್ಪಲಿಯಿಂದ ಥಳಿಸಿದ್ದಾಳೆ.

ಬೇಜವಾಬ್ದಾರಿಯಾಗಿ ಹಾಗೂ ಮದ್ಯ ಸೇವಿಸಿ ಕಾರ್ ಚಾಲನೆ ಮಾಡಿ ಅಪಘಾತ ಮಾಡಿರುವುದಕ್ಕೆ ಆಕ್ರೋಶಗೊಂಡ ಮಹಿಳೆ ಚಪ್ಪಲಿ ಏಟು ನೀಡಿದ್ದಾಳೆ.

ಮಹಿಳೆ ಕಾರ್ ಚಾಲಕನಿಗೆ ಚಪ್ಪಲಿ ಏಟು ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಸದ್ಯ ಕಾರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!