ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಕೆ ಆರ್ ನಗರದ ಮಹಿಳೆಯನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಎಚ್ ಡಿ ರೇವಣ್ಣ ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ದೋಷಾರೋಪ ನಿಗದಿಪಡಿಸದಂತೆ ನೀಡಿದ ಮಧ್ಯಂತರ ಆದೇಶವನ್ನು ಮತ್ತೆ ವಿಸ್ತರಣೆ ಮಾಡಿ ವಿಚಾರಣೆಯನ್ನು ಫೆಬ್ರವರಿ 7 ಕ್ಕೆ ಮುಂದೂಡಿ ಆದೇಶ ಹೊರಡಿಸಿತು.
ಇಂದು ಹೈಕೋರ್ಟ್ ನಲ್ಲಿ ಎಚ್ ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ, ದೋಷಾರೋಪ ನಿಗದಿಪಡಿಸದಂತೆ ನೀಡಿದ ಮಧ್ಯಂತರ ಆದೇಶವನ್ನು ಮತ್ತೆ ಹೈಕೋರ್ಟ್ ವಿಸ್ತರಣೆ ಮಾಡಿದೆ.
ಮಧ್ಯಂತರ ಆದೇಶ ಫೆಬ್ರವರಿ 7ರವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಹೀಗಾಗಿ ಎಚ್ ಡಿ ರೇವಣ್ಣ ಅವರಿಗೆ ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.